ಸೂರ್ಯಕುಮಾರ್ ಯಾದವ್ ಗುಜರಾತ್ ವಿರುದ್ಧ ಇತ್ತೀಚಿನ ಸೂಪರ್ ಶತಕದೊಂದಿಗೆ ತಮ್ಮ ಫಾರ್ಮ್ ಅನ್ನು ಮುಂದುವರೆಸಿದರು. ಮತ್ತೊಂದೆಡೆ ಟೀಂ ಇಂಡಿಯಾದ ಸ್ಟಾರ್ ಆಟಗಾರನಿಗೆ ತಲೆನೋವು ಶುರುವಾಗಿದೆ. ಈ ಆಟಗಾರ ಬೇರೆ ಯಾರೂ ಅಲ್ಲ ಭಾರತ ತಂಡದ ನಾಯಕ ರೋಹಿತ್ ಶರ್ಮಾ. ರೋಹಿತ್ ಶರ್ಮಾ ಇದೀಗ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ತಮ್ಮ ಕಳಪೆ ಪ್ರದರ್ಶನದಿಂದ ಟೀಂ ಇಂಡಿಯಾ ಅಭಿಮಾನಿಗಳಲ್ಲಿ ಆತಂಕ ಮೂಡಿಸುತ್ತಿದ್ದಾರೆ.