ಸೂರ್ಯಕುಮಾರ್ ಯಾದವ್ 2022ರಲ್ಲಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅಬ್ಬರಿಸಿದರು. ಅವರು ಈ ವರ್ಷ 31 T20 ಅಂತರಾಷ್ಟ್ರೀಯ ಇನ್ನಿಂಗ್ಸ್ಗಳಲ್ಲಿ 188 ರ ಸ್ಟ್ರೈಕ್ ರೇಟ್ನಲ್ಲಿ ಒಟ್ಟು 1164 ರನ್ ಗಳಿಸಿದರು. ಸೂರ್ಯಕುಮಾರ್ ಒಂದು ವರ್ಷದಲ್ಲಿ ಈ ಮಾದರಿಯಲ್ಲಿ ಸಾವಿರ ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಮತ್ತು ವಿಶ್ವದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡರು.
ಸೂರ್ಯಕುಮಾರ್ ಯಾದವ್ ಈ ವರ್ಷ T20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅನೇಕ ಸ್ಮರಣೀಯ ಇನ್ನಿಂಗ್ಸ್ಗಳನ್ನು ಆಡಿದ್ದಾರೆ. ಈ ಕಾರಣದಿಂದಾಗಿ ಅವರು 7 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಸಂದರ್ಭದಲ್ಲಿ ಅವರು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ 2016ರಲ್ಲಿ 6 ಬಾರಿ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿಗೆ ಭಾಜನರಾಗಿದ್ದ ಕೊಹ್ಲಿ ಹೆಸರಿನಲ್ಲಿತ್ತು.