ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ.ರಜನೀಶ್ ಗೋಯಲ್ ಅವರಿಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊಣೆಗಾರಿಕೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
2/ 7
ಇನ್ನೂ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಐಎಸ್ಎಸ್ ಪ್ರಸಾದ್ ಅವರನ್ನು ಬೆಂಗಳೂರಿನ ಅಭಿವೃದ್ಧಿ ಆಯುಕ್ತ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆಗಾರಿಕೆಯನ್ನು ನೀಡಲಾಗಿದೆ.
3/ 7
ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ. ಉಮಾಶಂಕರ್ - ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪಂಕಜ್ ಕುಮಾರ್ ಪಾಂಡೆ-ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ, ವಿನೋಥ್ ಪ್ರಿಯಾ-ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಎಂಡಿ.
4/ 7
ರಮೇಶ್ ಡಿಎಸ್ - ಗಣಿ ಹಾಗೂ ವಿಜ್ಞಾನ ಇಲಾಖೆಯ ನಿರ್ದೇಶಕ, ಸೋಮಶೇಖರ್ ಎಸ್ ಜೆ- ಕರ್ನಾಟಕ ಸಣ್ಣ ಕೈಗಾರಿಗೆ ಅಭಿವೃದ್ಧಿ ನಿಗಮದ ಎಂಡಿ ಮತ್ತು ಸತ್ಯಭಾಮಾ-ಅತಿಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ನಿರ್ದೇಶಕ.
5/ 7
ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ (Karnataka Chief Secretary) ಪಿ.ರವಿಕುಮಾರ್ (P Ravikumar) ಮೇ 31ರಂದು ನಿವೃತ್ತರಾಗಲಿದ್ದಾರೆ.
6/ 7
ಈ ಹಿನ್ನೆಲೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತೆ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ (IAS Officer Vandita Sharma) ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ವಂದಿತಾ ಶರ್ಮಾ ಅವರ ಅಧಿಕಾರದ ಅವಧಿ 2023 ನವೆಂಬರ್ ವರೆಗೆ ಇರಲಿದೆ.
7/ 7
ಈ ಹುದ್ದೆಗೇರಿದ ನಾಲ್ಕನೇ ಮಹಿಳೆ ಇವರಾಗಿದ್ದಾರೆ. ಈ ಹಿಂದೆ 200ರಲ್ಲಿ ತೆರೇಸಾ ಭಟ್ಟಾಚಾರ್ಯ (Theresa Bhattacharya), 2006ರಲ್ಲಿ ಮಾಲತಿ ದಾಸ್ (Malatidas) ಮತ್ತು 2017ರಲ್ಲಿ ರತ್ನಪ್ರಭಾ (Ratnaprabha) ಅವರು ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ.