Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

ಪುತ್ತೂರು: ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ನಳಿನ್ ಕುಮಾರ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಕಾರಣ ಎಂದು ಆರೋಪಿಸಿ ಅವರಿಬ್ಬರ ಫೋಟೋ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸನ ಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಭೇಟಿ ನೀಡಿದ್ದ ವೇಳೆ ಭಾರೀ ಹೈಡ್ರಾಮ ನಡೆದಿದೆ

First published:

  • 18

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಆ ಬಳಿಕ ಬ್ಯಾನರ್ ಹಾಕಿದ ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರಿಗೆ ರಕ್ತಬರುವಂತೆ ಥಳಿಸಿದ್ದು ಭಾರೀ ಸುದ್ದಿಯಾಗಿ ಬಿಜೆಪಿ ನಾಯಕರು ಪುತ್ತೂರಿಗೆ ಹೋಗುವಂತೆ ಮಾಡಿತ್ತು. ಅದರಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಪುತ್ತೂರಿಗೆ ಭೇಟಿ ನೀಡಿ ಹಲ್ಲೆಗೊಳಗಾದ ಕಾರ್ಯಕರ್ತರನ್ನು ಭೇಟಿ ಮಾಡಿದ್ದಾರೆ.

    MORE
    GALLERIES

  • 28

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೋಲೀಸ್ ದೌರ್ಜನ್ಯ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿಗೆ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರ ಮಧ್ಯೆ ಕಿತ್ತಾಟ ನಡೆದಿದೆ.

    MORE
    GALLERIES

  • 38

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಸಂದರ್ಭದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದ್ದು, ಹಿಂದೂಪರ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ನಡೆದಿದೆ.

    MORE
    GALLERIES

  • 48

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಬಸವರಾಜ್ ಪಾಟೀಲ್ ಯತ್ನಾಳ್ ಆಸ್ಪತ್ರೆಗೆ ಬಂದಿದ್ದ ವೇಳೆ ಅವರ ಜೊತೆ ಬಿಜೆಪಿ ಕಾರ್ಯಕರ್ತರು ಕೂಡ ಬಂದಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಒಳಗೆ ಬಿಡಲು ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಕಾರ್ಯಕರ್ತರು ನಿರಾಕರಿಸಿದ್ದಾರೆ.

    MORE
    GALLERIES

  • 58

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಎದುರಲ್ಲೇ ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಅವಮಾನ ಉಂಟಾಗಿದ್ದು, ಆಸ್ಪತ್ರೆಯ ಬಾಗಿಲಲ್ಲೇ ನಿಂತು ಪುತ್ತಿಲ ಪರ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರನ್ನು ಹೊರಗೆ ತಳ್ಳಿದ್ದಾರೆ.

    MORE
    GALLERIES

  • 68

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನ ಬಿಜೆಪಿ ಕಾರ್ಯಕರ್ತರು ನೋಡಬೇಡಿ ಎಂದು ಹಿಂದೂ ಪರ ಮತ್ತು ಪುತ್ತಿಲ ಪರ ಕಾರ್ಯಕರ್ತರು ತಳ್ಳಿದ್ದು, ಈ ವೇಳೆ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ಉಂಟಾಗಿದೆ.

    MORE
    GALLERIES

  • 78

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಬಳಿಕ ಬಸವರಾಜ್ ಪಾಟೀಲ್ ಯತ್ನಾಳ್‌ಗೆ ಮಾತ್ರ ಆಸ್ಪತ್ರೆಯ ಒಳಗೆ ಬರಲು ಅರುಣ್ ಕುಮಾರ್ ಪುತ್ತಿಲ ಟೀಂ ಅವಕಾಶ ನೀಡಿದ್ದು, ಬಿಜೆಪಿ ಕಾರ್ಯಕರ್ತರು ಅನಿವಾರ್ಯವಾಗಿ ಮುಖ ಸಪ್ಪೆ ಹಾಕಿಕೊಂಡು ಹೊರಗೆ ಬರಬೇಕಾಯಿತು.

    MORE
    GALLERIES

  • 88

    Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!

    ಬ್ಯಾನರ್ ವಿಚಾರವಾಗಿ ಹಿಂದುತ್ವಪರ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಬಿಜೆಪಿ ನಾಯಕರೇ ಸೂಚನೆ ನೀಡಿದ್ದು ಎಂದು ಪುತ್ತೂರಿನಾದ್ಯಂತ ಸುದ್ದಿ ಹಬ್ಬುತ್ತಿದ್ದು, ಈ ಪ್ರಕರಣವನ್ನು ಕಾಂಗ್ರೆಸ್‌ ಮೇಲೆ ಆರೋಪ ಮಾಡುತ್ತಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧವೂ ಹಿಂದೂಪರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    MORE
    GALLERIES