ಈ ಘಟನೆ ಚಾಮರಾಜನಗರ ಜಿಲ್ಲೆ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂತೂರು ಮೋಳೆ ಗ್ರಾಮದ ನಿಂಗರಾಜು ಸಾವನ್ನಪ್ಪಿದ ಆರೋಪಿ.
2/ 7
ನಿಂಗರಾಜುನನ್ನು ಅಪ್ರಾಪ್ತ ಬಾಲಕಿ ಅಪಹರಣ ಕೇಸ್ನಲ್ಲಿ ವಿಚಾರಣೆಗೆಂದು ಪೊಲೀಸ್ ಜೀಪ್ನಲ್ಲಿ ಠಾಣೆಗೆ ಕರೆತರಲಾಗುತ್ತಿತ್ತು.
3/ 7
ಈ ವೇಳೆ ಚಲಿಸುತ್ತಿದ್ದ ಜೀಪ್ನಿಂದ ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ ನಿಂಗರಾಜು ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಿಸದೇ ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
4/ 7
ಈ ಘಟನೆಯಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಹಾಗೂ ಸಾವಿನ ಬಗ್ಗೆ ಸಂಶಯವಿದೆ ಎಂದು ಆರೋಪಿಸಿ ಕುಂತೂರು ಮೋಳೆ ಗ್ರಾಮಸ್ಥರು ಯಳಂದೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
5/ 7
ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಎಸ್ಪಿ ಶಿವಕುಮಾರ್, ಜೀಪ್ನಲ್ಲಿದ್ದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡುವುದಾಗಿ ತಿಳಿಸಿದರು.
6/ 7
ಘಟನೆಯ ಸತ್ಯಾಸತ್ಯೆತೆ ಬಗ್ಗೆ ತನಿಖೆ ಸೂಕ್ತ ತನಿಖೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದರು.
7/ 7
ಇನ್ನು ಆಸ್ಪತ್ರೆ ಮುಂಭಾಗ ನಿಂಗರಾಜು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.