ಕನಕಪುರ ನಗರ ನಿವಾಸಿಯಾಗಿರುವ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು (22) ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ್ಯಸಿಡ್ ದಾಳಿಯಿಂದ ಅಪ್ರಾಪ್ತ ಯುವತಿಯ ಮುಖಕ್ಕೆ ಗಾಯ ಹಾಗೂ ಎಡ ಭಾಗದ ಕಣ್ಣಿಗೆ ಗಾಯವಾಗಿದೆ. ಸಂತ್ರಸ್ತೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿದೆ.
ಮಿಂಟೋ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಮಿಂಟೋ ಆಸ್ಪತ್ರೆ ವೈದ್ಯರು ಬಾಲಕಿಗೆ ಚಿಕಿತ್ಸೆ ನೀಡಿ ಧೈರ್ಯ ತುಂಬಿದ್ದಾರೆ. ಬಾಲಕಿಯ ಒಂದು ಕಣ್ಣಿಗೆ ಭಾಗಶಃ ಹಾನಿಯಾದ ಹಿನ್ನೆಲೆಯಲ್ಲಿ ಕೊಂಚಮಟ್ಟಿನ ದೃಷ್ಟಿ ದೋಷ ಬರುವ ಸಾಧ್ಯತೆ ಇದೆ ಎಂದು ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ನ್ಯೂಸ್18 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಕನಕಪುರ ಟೌನ್ ಠಾಣೆಯಲ್ಲಿ ಪೊಕ್ಸೋ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಬಳಿಕ ಆರೋಪಿ ಬೈಕ್ನಲ್ಲಿ ಪರಾರಿಯಾಗಿದ್ದು, ಆ್ಯಸಿಡ್ ದಾಳಿಕೋರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. (ಸಾಂದರ್ಭಿಕ ಚಿತ್ರ)
ಆ್ಯಸಿಡ್ ದಾಳಿಯಿಂದ ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ್ದೆ. ಈ ವೇಳೆಯೇ ಅವರು ಮಾಸಾಶನವನ್ನು ಮೂರು ಸಾವಿರದಿಂದ, ಹತ್ತು ಸಾವಿರ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದ್ದರು. ಅರ್ಜಿ ಸಲ್ಲಿಸಿದ ಬಳಿಕ ಕಳೆದ ಮೂರು ತಿಂಗಳಿನಿಂದ ನನಗೆ ಹತ್ತು ಸಾವಿರ ರೂಪಾಯಿ ಮಾಸಾಶನ ಬರುತ್ತಿದೆ ಎಂದು ಸಂತ್ರಸ್ತೆ ತಿಳಿಸಿದ್ದರು. (ಸಾಂದರ್ಭಿಕ ಚಿತ್ರ)
ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಹಲವು ಸಕಾರಾತ್ಮಕ ಬೆಳವಣಿಗೆಗಳನ್ನು ನಾವು ಕಂಡಿದ್ದೇವೆ. ಶಿಶು ಮರಣ ದರ ಹಾಗೂ ತಾಯಿ ಮರಣ ದರ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಾಕ್ಲಿಯರ್ ಇಂಪ್ಲಾಂಟ್, ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ನೆರವಿನಂತಹ ಸೂಕ್ಷ್ಮ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ತಿಳಿಸಿದ್ದರು. (ಸಾಂದರ್ಭಿಕ ಚಿತ್ರ)