ಮಳೆಯಿಂದ ನಗರದ ರಸ್ತೆ, ಸಿಗ್ನಲ್ಗಳಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮೈಸೂರು ರಸ್ತೆ, ಚಾಮರಾಜಪೇಟೆ, ಹೊಸಕೆರೆಹಳ್ಳಿ, ವಿಜಯನಗರ, ನಾಯಂಡಹಳ್ಳಿ, ಶ್ರೀನಗರ, ಚಂದ್ರಾ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಬಿಟಿಎಂ ಲೇಔಟ್, ಜಯನಗರ, ಕೆಆರ್ ಮಾರ್ಕೆಟ್ ಸೇರಿ ಹಲವೆಡೆ ಜೋರು ಮಳೆಯಾಗಿದೆ.