ಎರಡು ದಿನಗಳ ಕಾಲ ಉಡುಪಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೇ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
2/ 8
ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥರು ಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿದರು.
3/ 8
ಈ ವೇಳೆ ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಚಂದ್ರಶಾಲೆಯಲ್ಲಿ ನ್ನು ಶಾಲುಹೊದಿಸಿ ಪರ್ಯಾಯ ಶ್ರೀಗಳು ಸನ್ಮಾನಿಸಿದರು
4/ 8
ಸಿಎಂ ಉಡುಪಿ ಮಠ ಭೇಟಿ ವೇಳೆ ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ, ಶಾಸಕರಾದ ರಘುಪತಿ ಭಟ್ , ಲಾಲಾಜಿ ಮೆಂಡನ್ ಸೇರಿದಂತೆ ಇತರರು ಉಪಸ್ಥಿತರಿದ್ದರು
5/ 8
ಮಠಕ್ಕೆ ಭೇಟಿ ನೀಡುವ ಮುನ್ನ ಸಿಎಂ ವಿವಿಧ ಕಾರ್ಯಕ್ರಮಗಳಲ್ಲಿ ಇಂದು ಭಾಗಿಯಾಗಿದ್ದರು. ಕಾಪು ತಾಲ್ಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶ ಪುಣ್ಯೋತ್ಸವ,ರಥೋತ್ಸವದಲ್ಲೂ ಭಾಗಿಯಾಗಿದ್ದರು.
6/ 8
ಈ ವೇಳೆ ಮೊಗವೀರರ ಮಹಾಸಂಘ ಕೋರಿರುವಂತೆ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ 5 ಕೋಟಿ ರೂ.ಗಳನ್ನು ಮುಜರಾಯಿ ಇಲಾಖೆ ಮೂಲಕ ನೀಡಲಾಗುವುದು ಎಂಬ ಭರವಸೆ ನೀಡಿದರು
7/ 8
ನೂತನ ಬಸ್ ನಿಲ್ದಾಣ ಉದ್ಘಾಟನೆ ಹಾಗೂ ಡಾ ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.
8/ 8
ಇದಾದ ಬಳಿಕ ಮಲ್ಪೆಯ ಬಾಲಕರ ಶ್ರೀರಾಮ ಭಜನಾ ಮಂಡಳಿ ಆಯೋಜಿಸಿದ್ದ ಬ್ರಹ್ಮಕಳಶೋತ್ಸವ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು