Karnataka Rains: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಗಂಟೆಗೆ 30-40 ಕಿಮೀ ವೇಗದ ಗಾಳಿಯ ಜೊತೆಗೆ ಅಬ್ಬರದ ಮಳೆ
Karnataka Weather: ರಾಜ್ಯದಲ್ಲಿ ಮಂಗಳವಾರ ಮತ್ತು ಬುಧವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಮತ್ತು ಉತ್ತರ ಒಳನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಒಂದು ವಾರದಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದೆ.
2/ 7
ಆದ್ರೆ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಬಿಸಿಲಿನ ತಾಪ ಮಾತ್ರ ಕಡಿಮೆಯಾಗಿಲ್ಲ. ಗುಡುಗು-ಮಿಂಚು ಕಾಣಿಸಿಕೊಂಡರೂ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯಾಗಿಲ್ಲ.
3/ 7
ಇಂದು ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಹನಿ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಕೆಲವು ಪರಿಸರದಲ್ಲಿ ತಾಪಮಾನ ಕನಿಷ್ಠ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿವೆ.
4/ 7
ಭಾನುವಾರ ಮತ್ತು ಸೋಮವಾರ ಸುರಿದ ಮಳೆಗೆ ಬೆಂಗಳೂರಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕೆಆರ್ ಸರ್ಕಲ್ ಬಳಿಯ ಅಂಡರ್ಪಾಸ್ ದುರಂತ ಇಡೀ ರಾಜಧಾನಿಯನ್ನೇ ಬೆಚ್ಚಿಬೀಳಿಸಿತ್ತು.
5/ 7
ಗಾಳಿಯ ವೇಗ ಗಂಟೆಗೆ 30- 40 ಕಿಮೀ ಇರಲಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗಾಳಿಯ ವೇಗ ಹೆಚ್ಚಾಗಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ.
6/ 7
ಇಂದು ಹೊರತುಪಡಿಸಿ ನಾಳೆಯಿಂದ ಮುಂದಿನ ಐದು ದಿನ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಳಹವೆ ಇರಲಿದೆ.
7/ 7
ಮುಂಗಾರು ವಿಳಂಬ
ಈ ಬಾರಿ ಮುಂಗಾರು ಮಳೆ ವಿಳಂಬವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಜೂನ್ 4 ಅಥವಾ ನಾಲ್ಕು ದಿನ ತಡವಾಗಿ ಮುಂಗಾರು ಮಾರುತುಗಳು ಕೇರಳವನ್ನು ಪ್ರವೇಶಿಸುವ ನಿರೀಕ್ಷೆಗಳಿವೆ.
First published:
17