ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಗ್ ಅವರು, ಸರ್ವೀಸ್ ರಸ್ತೆಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡುವುದನ್ನು ಮುಂದೂಡಲಾಗಿದೆ ಎಂದು ಬರೆದು ಟೋಲ್ ದರದ ಪಟ್ಟಿಯ ಫೋಟೋವನ್ನು ಟ್ವೀಟ್ ಮಾಡಿದ್ದರು. ಆದರೆ ಕೆಲ ಸಮಯದ ಬಳಿಕ ತಮ್ಮ ಟ್ವೀಟ್ ಡಿಲೀಟ್ ಮಾಡಿದ ಸಂಸದರು, ಅಧಿಕೃತ ಟೋಲ್ ಬೆಲೆಯ ಪಟ್ಟಿಯನ್ನು ಪಡೆಕೊಂಡು ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಪ್ರತಾಪ್ ಸಿಂಹ ಅವರು ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಸಾರ್ವಜನಿಕರು, ಉತ್ತಮ ನಿರ್ಧಾರ ಧನ್ಯವಾದಗಳು. ಕಾಮಗಾರಿ ಸಂಪೂರ್ಣವಾಗಿ ಪೂರ್ಣ ಆಗುವವರೆಗೂ ಟೋಲ್ ಸಂಗ್ರಹಕ್ಕೆ ಮುಂದಾಗಬೇಡಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಮೊದಲು ಸರ್ವಿಸ್ ರಸ್ತೆಯನ್ನು ಸರಿ ಮಾಡಿ ಆಮೇಲೆ ಟೋಲ್ ಸಂಗ್ರಹ ಮಾಡಿ ಎಂದರೆ, ಒಂದು ಕಿಲೋ ಮೀಟರ್ಗೆ 2.45 ರೂಪಾಯಿ ನಿಗದಿ ಮಾಡಿದ್ದಾರೆ. ಸಾಮಾನ್ಯ ಜನರು ಎಲ್ಲಿಂದ ಹಣ ಪಾವತಿ ಮಾಡಬೇಕು. ಇದರಿಂದ ಜನರಿಗೆ ಅನುಕೂಲಕ್ಕಿಂತ ತೊಂದರೆ ಹೆಚ್ಚಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.