ಬನಶಂಕರಿಯ ಅಪಾರ್ಟ್ಮೆಂಟ್ನ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವು
10 ವರ್ಷದ ಬಾಲಕನೊಬ್ಬ ಆಯಾತಪ್ಪಿ 11ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಆಟವಾಡುತ್ತಿರುವಾಗ ಈ ಅವಘಡ ಸಂಭವಿಸಿದ್ದು, ಸಾವನ್ನಪ್ಪಿದ ಬಾಲಕನನ್ನು ಗಗನ್ ಎಂದು ಗುರುತಿಸಲಾಗಿದೆ.
ಬನಶಂಕರಿಯ ಶೋಭಾ ವ್ಯಾಲಿ ಅಪಾರ್ಟ್ಮೆಂಟ್ನಲ್ಲಿ ಈ ಅಪಘಡ ಸಂಭವಿಸಿದೆ, ಗುರುವಾರ ಈ ಘಟನೆ ನಡೆದಿದ್ದು , ಬಾಲಕ 11ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
2/ 4
ಮನೆಯಲ್ಲಿ ಯಾರು ಇಲ್ಲದ ಕಾರಣ 10 ವರ್ಷ ಬಾಲಕ ಗಗನ್ ಟೇರೆಸ್ ಮೇಲೆ ಆಟವಾಡಲು ಹೋಗಿದ್ದ. ಈ ವೇಳೆ ಆಯಾತಪ್ಪಿ ಆತ ಕೆಳಗೆ ಬಿದ್ದಿದ್ದಾನೆ. ಕುಟುಂಬ ಸದಸ್ಯರು ಮನೆಗೆ ಬಂದ ಬಳಿಕ ವಿಷಯ
3/ 4
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನೆ ಕುರಿತು ಆರ್ಆರ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನ ಕಳೆದು ಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
4/ 4
ಕಳೆದೆರಡು ದಿನಗಳ ಹಿಂದೆ ಕೂಡ ಇದೇ ರೀತಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿತ್ತು. ಚಿಕ್ಕಬಳ್ಳಾಪುರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಗೀತಿಕ್ ಎಂಬ ಬಾಲಕನ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಿ ಪರಾರಿಯಾಗಿದ್ದ. ಈ ದಾರುಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು