ಇನ್ನು ಬೆಂಗಳೂರಿನಲ್ಲಿ ಮತ್ತೊಬ್ಬ ಖದೀಮ ಸಿಕ್ಕಿಬಿದ್ದಿದ್ದಾನೆ. ಸರಗಳ್ಳತನ ಮಾಡೋದೆ ಈತನ ಕಾಯಕ.. ಮೂರು ಬಾರಿ ಜೈಲಿಗೆ ಹೋಗಿ ಬಂದ್ರು ಬುದ್ದಿ ಕಲಿಯದ ಖದೀಮ.. ಬೆಂಗಳೂರಿನಲ್ಲಿ 30 ಕ್ಕಿಂತ ಹೆಚ್ಚು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ಖದೀಮ ಮೈಸೂರು ಮೂಲದ ಸುಹೈಲ್ (೨೮)ನನ್ನು ಬಂಧಿಸಲಾಗಿದೆ. ಬಂಧಿತನಿಂದ 19 ಲಕ್ಷ ಮೌಲ್ಯದ 338 ಗ್ರಾಂ,ಚಿನ್ನ, ಕೃತ್ಯಕ್ಕೆ ಬಳಸಿದ್ದ ಮೂರು ಬೈಕ್ ಜಪ್ತಿ ಮಾಡಲಾಗಿದೆ.
ಮೋಜು ಮಸ್ತಿಗಾಗಿ ನಗರದೆಲ್ಲೆಡೆ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ. ಹೆಣ್ಣೂರು, ಆರ್.ಆರ್.ನಗರ, ಹೆಬ್ಬಾಳ, ಬನಶಂಕರಿ ಸೇರಿದಂತೆ 30 ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇತ್ತೀಚೆಗೆ ಜೈಲಿಂದ ಬಿಡುಗಡೆಯಾಗಿ ಸರಗಳ್ಳತನ ಕೃತ್ಯದಲ್ಲಿ ತೊಡಗಿದ್ದ. ಈ ಬಗ್ಗೆ ರಾಮಮೂರ್ತಿ ನಗ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ ಸ್ಪೆಕ್ಟರ್ ಮೆಲ್ವಿನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಯಶವಂತಪುರ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.