Bangaluru Crime: ಕಾಲೇಜು ವಿದ್ಯಾರ್ಥಿಗಳ ಬ್ಯಾಗ್ನಲ್ಲಿ ಕೆಜಿಗಟ್ಟಲೇ ಗಾಂಜಾ.. ಏನಾಗ್ತಿದೆ ಬೆಂಗಳೂರಲ್ಲಿ?
ಬೆಂಗಳೂರು: ದೊಡ್ಡ ಪ್ರಯಾಣದಲ್ಲಿ ಮಾದಕವಸ್ತುಗಳು ಪತ್ತೆಯಾಗಿವೆ ಎಂಬ ಸುದ್ದಿ ಇತ್ತೀಚೆಗೆ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಸಹ ಎರಡು ಡ್ರಗ್ಸ್ ಪ್ರಕರಣಗಳಲ್ಲಿ ಹತ್ತಾರು ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಪ್ರತಿಷ್ಟಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ 1 ಕೆಜಿಗೂ ಹೆಚ್ಚು ಗಾಂಜಾ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ಇನ್ ಕಂಟ್ಯಾಕ್ಸ್ ಲೇಔಟ್ ನಲ್ಲಿ ಘಟನೆ ನಡೆದಿದೆ.
2/ 5
ಯುವಕರು ಮಾದಕ ವಸ್ತು ಸೇವಿಸಿ ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡ್ತಿದ್ದಾಗ ಸ್ಥಳೀಯರು ಹಿಡಿದು ಅವರ ಬ್ಯಾಗ್ ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಕಾಲೇಜು ಬ್ಯಾಗ್ ಒಳಗೆ ಗಾಂಜಾ ಸಾಗಿಸ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಫೆಬ್ರವರಿ 11 ರ ರಾತ್ರಿ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
3/ 5
ವಿದ್ಯಾರ್ಥಿಗಳು ವಾಸವಿದ್ದ ಬಾಡಿಗೆ ರೂಮ್ ನಲ್ಲೂ ಪೌಡರ್ ರೂಪದ ಮಾದಕ ವಸ್ತು ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)
4/ 5
ಇನ್ನು ಉತ್ತರ ವಿಭಾಗದ ಪೊಲೀಸರ ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಶಿಬಾರಾಮ, ರಾಘವೇಂದ್ರ, ನಾಗೇಶ್, ನೂರ್ ವುಲ್ ಬಂಧಿತ ಆರೋಪಿಗಳು. ಬಂಧಿತರ ಬಳಿ ಬರೋಬ್ಬರಿ 13.3 ಕೆಜಿ ಗಾಂಜಾ ದೊರೆತಿದೆ.
5/ 5
ಒರಿಸ್ಸಾದಿಂದ ಕಡಿಮೆ ಬೆಲೆಗೆ ಗಾಂಜಾವನ್ನು ತಂದು ಸಿಲಿಕಾನ್ ಸಿಟಿಯಲ್ಲಿ ಮಾರಾಟ ಮಾಡುತಿದ್ದರು. ರೈಲಿನ ಮೂಲಕ ಲಗೇಜ್ ಬ್ಯಾಗಿನಲ್ಲೇ ಗಾಂಜಾವನ್ನು ಸಾಗಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.