Heavy Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ; ಹಲವೆಡೆ ಪವರ್ ಕಟ್
ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕಳೆದ ಎರಡು ತಿಂಗಳಿನಿಂದ ನೆತ್ತಿ ಸುಡುವಂತಹ ಬಿಸಿಲಿಗೆ ಕಾದ ಹಂಚಾಗಿದ್ದ ನಗರದಲ್ಲಿ ವರುಣ ತಂಪೆರೆದಿದ್ದಾನೆ. ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿತ್ತು. ಕಳೆದ ಎರಡು ತಿಂಗಳಿನಿಂದ ನೆತ್ತಿ ಸುಡುವಂತಹ ಬಿಸಿಲಿಗೆ ಕಾದ ಹಂಚಾಗಿದ್ದ ನಗರದಲ್ಲಿ ವರುಣ ತಂಪೆರೆದಿದ್ದಾನೆ
2/ 8
ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ.
3/ 8
ಸುರಿದ ಮಳೆಗೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಜೆ ವೇಳೆಗೆ ಕೆಲಸ ಮುಗಿಸಿಕೊಂಡು ಮನೆ ಸೇರಬೇಕೆಂದುಕೊಂಡವರಿಗೆ ವಾಹನ ದಟ್ಟಣೆ ಎದುರಾಗಿದೆ. ಬೈಕ್ ಸವಾರರು ಅಲ್ಲಲ್ಲಿ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಮಳೆಯಿಂದಾಗಿ ಶಿವಾಜಿನಗರದಲ್ಲಿ ಎಲ್ಲೆಡೆ ವಿದ್ಯುತ್ ಕಡಿತವಾಗಿದೆ.
4/ 8
ಬಿರುಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಶಾಂತಿನಗರ, ಕೋರಮಂಗಲ, ಅಡುಗೋಡಿ, ಮೆಜೆಸ್ಟಿಕ್, ಜೆ.ಸಿ. ನಗರ, ಜೆ.ಪಿ. ನಗರ ಸೇರಿದಂತೆ ಹಲವೆಡೆ ಮಳೆ ಸುರಿದಿದೆ.
5/ 8
ನಗರದಲ್ಲಿ ಬಿಸಲಿನ ತಾಪಮಾನ ಏರಿಕೆ ಹಿನ್ನೆಲೆ ಬೇಸತ್ತಿದ್ದ ಜನರು ಬೆಂಗಳೂರಿನಲ್ಲಿ ಮಳೆ ಕಂಡು ಸಂತಸಗೊಂಡಿದ್ದಾರೆ. ಆದರೆ ಜೋರಾಗಿ ಸುರಿಯುತ್ತಿರುವ ಗಾಳಿ ಮಳೆಗೆ ವಾಹನ ಸವಾರರು ಅಸ್ತವ್ಯಸ್ತರಾಗಿದ್ದಾರೆ.
6/ 8
ಬೈಕ್ ಸವಾರರು ಅಲ್ಲಲ್ಲಿ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಮಳೆಯಿಂದಾಗಿ ಶಿವಾಜಿನಗರದಲ್ಲಿ ಎಲ್ಲೆಡೆ ವಿದ್ಯುತ್ ಕಡಿತವಾಗಿದೆ.
7/ 8
ನಿನ್ನೆ ದೀಪಾಂಜಲಿ ನಗರದಲ್ಲಿ ಕರೆಂಟ್ ತಂತಿ ತಗುಲಿ ಯುವಕ ವಸಂತ್ ಸಾವು ಹಿನ್ನೆಲೆ ಇಂದು ಮಳೆ ಆರಂಭದಲ್ಲೇ ನಗರದ ಹಲವೆಡೆ ಕರೆಂಟ್ ಕಟ್ ಮಾಡಿದ ಬೆಸ್ಕಾಂ
8/ 8
ಮಲ್ಲೇಶ್ವರಂ, ಗುಟ್ಟಳ್ಳಿ, ವಸಂತನಗರ, ಶೇಷಾದ್ರಿ ರಸ್ತೆ ಕೆಲವು ಕಡೆ ಮಳೆ ಬೀಳುತ್ತಿರುವ ಕಾರಣದಿಂದಾಗಿ ಪವರ್ ಕಟ್ ಮಾಡಿದ ಬೆಸ್ಕಾಂ ಅಧಿಕಾರಿಗಳು