ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು,ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಅಕ್ಟೋಬರ್ 13ರವರೆಗೆ ಮಳೆಯಾಗುವ ನಿರೀಕ್ಷೆ ಇದೆ.ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.