ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ. ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ನಡೆದಿದೆ.
2/ 8
ಬಸ್ ನಲ್ಲಿ 45 ಜನ ಪ್ರಯಾಣ ಮಾಡುತ್ತಿದ್ದರು. ಘಟನೆಯಲ್ಲಿ 29 ಪ್ರಯಾಣಿಕರು ಗಾಯಗೊಂಡಿದ್ದಾರೆ. 25 ಜನರಿಗೆ ಸಣ್ಣಪುಟ್ಟ ಗಾಯ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
3/ 8
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
4/ 8
ಇತ್ತ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದೆ. ಒಟ್ಟು 5 ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
5/ 8
ಘಟನೆಯಲ್ಲಿ ಮೂರ್ನಾಲ್ಕು ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
6/ 8
ಯಲಹಂಕದಿಂದ ವೇಗವಾಗಿ ಬರ್ತಿದ್ದ ರಾಹುಲ್ ಅವರ ಕಾರ್ ಬ್ಯಾಟರಾಯನಪುರ ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಐದು ಕಾರುಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. (ಸಾಂದರ್ಭಿಕ ಚಿತ್ರ)
7/ 8
ಘಟನೆಯಲ್ಲಿ ಇಂಡಿಕಾ ಕಾರು ಚಾಲಕನ ಪರಿಸ್ಥಿತಿ ಗಂಭೀರವಾಗಿದೆ. ಕಾರ್ ನಲ್ಲಿದ್ದ ಪ್ರಯಾಣಿಕರ ಸಹ ಗಾಯಗೊಂಡಿದ್ದಾರೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
8/ 8
ಸದ್ಯ ಕಾರ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.