ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಯಲಹಂಕ ಬಳಿ 100 ಎಕರೆ ಜಾಗ ಗುರುತಿಸಲಾಗಿದೆ ಎಂದು ಕ್ರೀಡಾ ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ. ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್-2021 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮಾಹಿತಿ ನೀಡಿದರು.
2/ 8
ಕರ್ನಾಟಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 504 ಕೋಟಿ ರೂಪಾಯಿ ವೆಚ್ಚದಲ್ಲಿ ಆಟದ ಮೈದಾನ ನಿರ್ಮಾಣ ನಡೆಯುತ್ತಿದೆ.
3/ 8
ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಖೇಲೋ ಇಂಡಿಯಾ ಗೇಮ್ಸ್ನಲ್ಲಿ ಈ ಬಾರಿ 8 ಸಾವಿರ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
4/ 8
ಪ್ರತೀ ಶಾಲೆಯಲ್ಲಿ ಮಕ್ಕಳಿಗೆ ಒಂದೂವರೆ ಗಂಟೆಗಳ ಕಾಲ ಆಟ ಆಡಿಸುವಂತೆ ಸೂಚನೆ ನೀಡಲಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಸಿಂಥೆಟಿಕ್ ಟ್ರ್ಯಾಕ್ ಮಾಡಿದ್ದೇವೆ. ತುಮಕೂರು , ಮಂಡ್ಯ, ಬೆಂಗಳೂರಿನಲ್ಲಿ ಟೆಸ್ಟಿಂಗ್ ಟ್ರ್ಯಾಕ್ ಮಾಡಲಾಗುತ್ತಿದೆ.
5/ 8
ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಅವರಿಗೆ ಉತ್ತಮ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ತರಬೇತಿ ಪಡೆದ 25 ಮಕ್ಕಳು ನೆರೆಯ ಚೆನ್ನೈ, ಆಂಧ್ರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
6/ 8
ಇನ್ನು ಮಹಿಳಾ ಕ್ರೀಡಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟಟಿನಲ್ಲಿ 30 ಕಡೆ ಹಾಸ್ಟೆಲ್ ನಿರ್ಮಾಣ ಮಾಡಲಾಗಿದೆ. ಮೈಸೂರು ಭಾಗದಲ್ಲಿ ಗಡಿ ಮನೆ ಮಾಡಿದ್ದೇವೆ, ಹಳೆಯ ಕುಸ್ತಿಪಟುಗಳುಗೆ 1 ಸಾವಿರ ರೂ ಮಾಸಾಶನ ಹೆಚ್ಚಿಸಲಾಗಿದೆ.
7/ 8
ರಾಷ್ಟಮಟ್ಟದಲ್ಲಿ ಯಾವುದೇ ಕ್ರೀಡಾ ಕೂಟ ಇದ್ದರೂ ಪ್ರಥಮ ಆದ್ಯತೆಯನ್ನು ಬೆಂಗಳೂರಿಗೆ ನೀಡಬೇಕು. ಈ ಬಾರಿ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟ ಆಯೋಜಿಸಲು ನಮ್ಮ ಮೂಲಭೂತ ಸೌಕರ್ಯಗಳನ್ನು ಹಾಗೂ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದೇವೆ.
8/ 8
ಕಂಠೀರವ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟದ ಸಮಾರಂಭ ಜರುಗುತ್ತಿದ್ದು, ಸುಮಾರು 3800 ಕ್ರೀಡಾಪಟುಗಳು 20 ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ.