Bangalore Rain: ಬೆಂಗಳೂರಿನಲ್ಲಿ ಮಳೆ ಅಬ್ಬರ; ನದಿಗಳಾದ ರಸ್ತೆಗಳು
ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ನಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲೂ ಮಳೆ ಅಬ್ಬರ ಹೆಚ್ಚಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಇಂದು ಮಳೆ ಅಬ್ಬರ ಕೊಂಚ ಬಿರುಸಾಗಿದೆ. ಹವಾಮಾನ ಇಲಾಖೆ ತಿಳಿಸಿರುವಂತೆ ರಾಜಧಾನಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ
2/ 7
ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಗಾಂಧಿನಗರ, ಗೋವಿಂದರಾಜ ನಗರ, ಕಾಮಾಕ್ಷಿ ಪಾಳ್ಯ, ವಿಜಯನಗರ, ಪಟ್ಟೇಗಾರ ಪಾಳ್ಯ, ರಾಜಾಜಿ ನಗರ, ಸುಮ್ಮನಹಳ್ಳಿ, ನಾಗರಭಾವಿ, ಜಾಲಹಳ್ಳಿ ಸೇರಿದಂತೆ ಅನೇಕ ಕಡೆ ಮಳೆ ಆರ್ಭಟ ಜೋರಾಗಿತ್ತು.
3/ 7
ಮಧ್ಯಾಹ್ನ ಆರ್ಭಟಿಸಿದ ಮಳೆಗೆ ಸಿಲಿಕಾನ್ ಸಿಟಿ ಜನರು ಹೈರಾಣಾದರು. ಹಲವು ತಗ್ಗು ಪ್ರದೇಶದಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಸಂಕಷ್ಟಕ್ಕೆ ಒಳಗಾದರು
4/ 7
ವಾಯುಭಾರ ಕುಸಿತದಿಂದ ರಾಜ್ಯದೆಲ್ಲಡೆ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗಲಿದ್ದು, ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ
5/ 7
ಬೆಂಗಳೂರಿನಲ್ಲೂ ಮುಂದಿನ ಎರಡು ದಿನ ಮಳೆಯಾಗಲಿದ್ದು ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಂಟಿಗ್ರೇಡ್, ಕನಿಷ್ಟ ಉಷ್ಣಾಂಶ 20 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
6/ 7
ಕಳೆದೆರಡು ದಿನಗಳಿಂದ ರಾಜಧಾನಿಯಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಇಂದು ಅಬ್ಬರದ ಮಳೆಯಾಗಿದೆ.
7/ 7
ರಸ್ತೆಗಳಲ್ಲಿ ನೀರು ತುಂಬಿದ ಪರಿಣಾಮ ಸಂಚಾರಕ್ಕೆ ಅಡ್ಡಿಯುಂಟಾಗಿದೆ