ಬೇಲಿಯೇ ಎದ್ದು ಹೊಲ ಮೇಯ್ದಂಗೆ ಎಂಬ ಮಾತಿದೆ, ಈ ಮಾತಿಗೆ ಸಾಕ್ಷಿ ಎಂಬಂತಹ ಪ್ರಕರಣ ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿದೆ. ಅಪರಾಧ ಚಟುವಟಿಕೆಗಳನ್ನ ತಡೆಯಬೇಕಾದ ಪೊಲೀಸರೇ ಡ್ರಗ್ಸ್ ಮಾರಾಟಕ್ಕೆ ಮುಂದಾಗಿ ಬಂಧನಕ್ಕೊಳಗಾಗಿದ್ದಾರೆ.
ನಗರದ ಕೋರಮಂಗಲ ಠಾಣೆಯ (Koramangala Police Station) ಸಿಬ್ಬಂದಿಗಳಾದ ಸಂತೋಷ್ ಮತ್ತು ಶಿವಕುಮಾರ್ ಗಾಂಜಾ ಮಾರಾಟಕ್ಕೆ ಮುಂದಾಗಿದ್ದರು. ಈ ಇಬ್ಬರು ಪೇದೆಗಳು ಡ್ರಗ್ಸ್ ಪೆಡ್ಲರ್ ಗಳ ಮೂಲಕ ಗಾಂಜಾ ಖರೀದಿಸುತ್ತಿದ್ದರು.
2/ 5
ಈ ಇಬ್ಬರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.ನಗರದ ನಿವಾಸದ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಇಬ್ಬರು ಸಿಎಂ ನಿವಾಸದ ಬಳಿಯೇ ಗಾಂಜಾ ದಂಧೆಗೆ ಮುಂದಾಗಿದ್ದರು.
3/ 5
ಮೋಸ್ಟ್ ವಾಂಟೆಂಡ್ ಡ್ರಗ್ ಪೆಡ್ಲರ್ ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ.
4/ 5
ಸಂತೋಷ್ ಮತ್ತು ಶಿವಕುಮಾರ್ ಗಾಂಜಾ ಖರೀದಿಸಿದ ಬಳಿಕ ಡ್ರಗ್ಸ್ ಪೆಡ್ಲರ್ ಗಳಿಗೆ ಯಾವುದೇ ಹಣ ನೀಡಿರಲಿಲ್ಲ. ಹಣ ಕೇಳಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು
5/ 5
ಈ ವೇಳೆ ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿ ಅನುಮಾನದ ಮೇಲೆ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. . ಸದ್ಯ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ