Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

Belagavi Politics: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿರುವ ರಮೇಶ್ ಜಾರಕಿಹೊಳಿ ಸೋಲಿಸಲು ಗೋಕಾಕ್​ನಲ್ಲಿ ರಣವ್ಯೂಹ ರಚನೆ ಮಾಡಲಾಗಿದೆ.

First published:

  • 17

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ಗೋಕಾಕ್‌ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ. ಗೋಕಾಕ್ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

    MORE
    GALLERIES

  • 27

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ನಾಮಪತ್ರ ವಾಪಸ್ ಪಡೆದುಕೊಂಡಿರುವ ಚಂದನ್ ಗಿಡ್ಡನವರ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಡಾ.ಮಹಾಂತೇಶ ಕಡಾಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

    MORE
    GALLERIES

  • 37

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ಗೋಕಾಕ್ ತಾಲೂಕು ಜೆಡಿಎಸ್ ಅಧ್ಯಕ್ಷರೂ ಆಗಿರುವ ಚಂದನ್ ಗಿಡ್ಡನವರ್ ನಾಮಪತ್ರ ವಾಪಸ್ ಪಡೆಯುವ ಮೂಲಕ ದಳಪತಿಗಳಿಗೆ ಶಾಕ್ ನೀಡಿದ್ದಾರೆ.

    MORE
    GALLERIES

  • 47

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ಜೆಡಿಎಸ್​ನಿಂದ ಬಿ ಫಾರಂ ಪಡೆದು ನಾಮಪತ್ರ ಸಲ್ಲಿಸಿದ ನಂತರ ಯಾರೊಂದಿಗೆ ಚರ್ಚೆ ನಡೆಸದೇ ಚುನಾವಣೆಯಿಂದ ಹಿಂದೆ ಸರಿದಿರೋದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಪಕ್ಷದಿಂದ ಉಚ್ಛಾಟಿಸಲು ಜೆಡಿಎಸ್ ಮುಂದಾಗಿದೆ.

    MORE
    GALLERIES

  • 57

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ಈ ಬಗ್ಗೆ ಮಾತನಾಡಿರುವ ಚಂದನ್ ಗಿಡ್ಡನವರ್, ಕ್ಷೇತ್ರದಲ್ಲಿ ಶಾಸಕರನ್ನು ಬದಲಿಸಬೇಕಿದೆ. ಈ ಹಿನ್ನೆಲೆ ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದೇನೆ ಎಂದಿದ್ದಾರೆ.

    MORE
    GALLERIES

  • 67

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ಕಳೆದ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್​ನಿಂದ ಅಶೋಕ್ ಪೂಜಾರಿ ಸ್ಪರ್ಧೆ ಮಾಡಿದ್ದರು. ಆದರೆ ಈ ಬಾರಿ ಹೊಸ ಮುಖಕ್ಕೆ ಕಾಂಗ್ರೆಸ್ ಅವಕಾಶ ನೀಡಿದೆ

    MORE
    GALLERIES

  • 77

    Gokak: ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಸಂಚಲನ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ

    ಜೆಡಿಎಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದ ಕಾರಣ ಗೋಕಾಕ್​ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ. ನಿನ್ನೆಯಷ್ಟೇ ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿತ್ತು.

    MORE
    GALLERIES