Accident: ಮಂಗಳೂರಿನಲ್ಲಿ ರಸ್ತೆಯಲ್ಲಿ ಹೊತ್ತಿ ಉರಿದ ಬೈಕ್- ಬಸ್
ನಗರದ ಹಂಪನಕಟ್ಟೆ ಸಿಗ್ನಲ್ನಲ್ಲಿ ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಎರಡೂ ವಾಹನಗಳು ಸುಟ್ಟು ಹೋಗಿದೆ
ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಎರಡೂ ವಾಹನಗಳು ಹೊತ್ತಿ ಉರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
2/ 8
ನಗರದ ಹಂಪನಕಟ್ಟೆ ಸಿಗ್ನಲ್ನಲ್ಲಿ ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತು. ಅಪಘಾತದಲ್ಲಿ ಎರಡೂ ವಾಹನಗಳು ಸುಟ್ಟುಹೋಗಿವೆ. (ಸಾಂದರ್ಭಿಕ ಚಿತ್ರ)
3/ 8
ಖಾಸಗಿ ಸಿಟಿ ಬಸ್ ಹಂಪನಕಟ್ಟೆ ಸಿಗ್ನಲ್ ದಾಟಿ ಮುಂದೆ ಚಲಿಸುತ್ತಿದ್ದಂತೆ ಹಂಪನಕಟ್ಟೆಯಿಂದ ವೆಲೆನ್ಸಿಯ ಕಡೆಗೆ ಹೋಗುತ್ತಿದ್ದ ಬೈಕೊಂದು ಬಸ್ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ. (ಸಾಂದರ್ಭಿಕ ಚಿತ್ರ)
4/ 8
ಈ ವೇಳೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಬಸ್ ಚಕ್ರದಡಿ ಬಿದ್ದಿದ್ದು, ಬೈಕ್ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಬಸ್ನ ಡೀಸೆಲ್ ಟ್ಯಾಂಕ್ಗೆ ಕೂಡ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ಹೊತ್ತಿಗೊಂಡಿದೆ. (ಸಾಂದರ್ಭಿಕ ಚಿತ್ರ)
5/ 8
ಸದ್ಯ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಲ್ಲಿ ಬೈಕ್ ಸವಾರ ಡೈಲನ್ ಎಂಬುವವರ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. (ಸಾಂದರ್ಭಿಕ ಚಿತ್ರ)
6/ 8
ಅಪಘಾತವಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ ಚಾಲಕರು, ನಿರ್ವಾಹಕರು ಪ್ರಯಾಣಿಕರಿಗೆ ಬಸ್ನಿಂದ ಇಳಿಯುವಂತೆ ಸೂಚನೆ ನೀಡಿದ್ದಾರೆ. ತಕ್ಷಣಕ್ಕೆ ಬಸ್ನಿಂದ ಎಲ್ಲರೂ ಕೆಳಗೆ ಇಳಿದ ಪರಿಣಾಮ ಯಾವುದೇ ಜೀವ ಹಾನಿ ಸಂಭವಿಸಿಲ್ಲ.(ಸಾಂದರ್ಭಿಕ ಚಿತ್ರ)
7/ 8
ಘಟನೆಯಲ್ಲಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್ ಭಾಗಶಃ ಸುಟ್ಟಿದೆ. ಘಟನೆ ತಿಳಿದಾಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. (ಸಾಂದರ್ಭಿಕ ಚಿತ್ರ)
8/ 8
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಬುಲೆರೊ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ (ಸಾಂದರ್ಭಿಕ ಚಿತ್ರ)