ಹಾಸನ ಲೋಕಸಭಾ ಕಣ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ಉಭಯ ನಾಯಕರ ಪ್ರಚಾರ ದಿನದಿಂದ ದಿನಕ್ಕೆ ರಂಗೇರಿದೆ. ಇಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಮತ್ತು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಬ್ಬರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹಾಸನ ನಗರದ 14ನೇ ವಾರ್ಡ್ ವ್ಯಾಪ್ತಿ ಮತ್ತು ರಾಜಘಟ್ಟದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರೆ, ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅರಕೂಲಗೂಡಿನಲ್ಲಿ ಮತ ಪ್ರಚಾರ ನಡೆಸಿದರು.