ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕಾಲಾವಧಿಯಲ್ಲಿ ಆರಂಭಿಸಿದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್. ಮೊದಲಿಗೆ ಬೆಂಗಳೂರಿನಲ್ಲಿ ಮಾತ್ರ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ನಂತರ ಜಿಲ್ಲಾ ಕೇಂದ್ರಗಳಿಗೆ ಈ ಯೋಜನೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಈ ಯೋಜನೆಗೆ ಅನುದಾನ ನಿಲ್ಲಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇಂದಿರಾ ಕ್ಯಾಂಟೀನ್‌ಗೆ ರಾಜ್ಯ ಸರ್ಕಾರ ಅನುದಾನ ಸ್ಥಗಿತಗೊಳಿಸಿದೆ. ಆ ಮೂಲಕ ಬಡವರಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದ್ದ ಊಟಕ್ಕೂ ಕಲ್ಲು ಹಾಕಿದೆ ಎಂದು ಗುಂಡೂರಾವ್ ಆಕ್ರೋಶ ಹೊರ ಹಾಕಿದರು.
2/ 8
ಇಂದಿರಾ ಕ್ಯಾಂಟೀನ್ ಕಾಂಗ್ರೆಸ್‌ನ ಕೊಡುಗೆ ಎನ್ನುವ ಕಾರಣಕ್ಕೆ ಅನುದಾನ ನಿಲ್ಲಿಸಿದ್ದೀರಾ? ಅಥವಾ ಬಡವರ ಮೇಲೆ ನಿಷ್ಕಾಳಜಿಯಿಂದ ಅನುದಾನ ಸ್ಥಗಿತಗೊಳಿಸಿದಿರೋ ಎಂದು ಸಿಎಂ ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
3/ 8
ರಾಜಕೀಯ ದುರುದ್ದೇಶದಿಂದ ರಾಜ್ಯ ಸರ್ಕಾರ ಕ್ಯಾಂಟೀನ್‌ಗೆ ಅನುದಾನ ಸ್ಥಗಿತಗೊಳಿಸಿರುವುದು ಹೀನ ಬುದ್ದಿ. ಈ ಸರ್ಕಾರಕ್ಕೆ ಬಡವರ ಮೇಲೆ ನೈಜ ಕಾಳಜಿಯಿದ್ದರೆ ಇಂದಿರಾ ಕ್ಯಾಂಟೀನ್‌ಗೆ ಅನುದಾನ ನೀಡಲಿ ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ,
4/ 8
ಇಂದಿರಾ ಕ್ಯಾಂಟೀನ್ ಗೆ ಆಹಾರ ಅರಸಿ ಬರುವವರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದೆ. ಇಂದಿರಾ ಕ್ಯಾಂಟೀನ್ ಗೆ ಆಗಮಿಸುವ ಗ್ರಾಹಕರ ಸಂಖ್ಯೆ ಅರ್ಧಕ್ಕರ್ಧ ಕುಸಿತವಾಗಿರುವ ಅಂಕಿ ಅಂಶಗಳ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
5/ 8
ಇಂದಿರಾ ಕ್ಯಾಂಟೀನ್ ಗ್ರಾಹಕರ ಸಂಖ್ಯೆ ಶೇ.60ರಷ್ಟು ಕುಸಿದಿದೆ ಎನ್ನಲಾಗಿದೆ. ಮೊದಲು ದಿನ ನಿತ್ಯ 3.5 ಲಕ್ಷ ಮಂದಿ ಪ್ರತಿದಿನ ಕ್ಯಾಂಟೀನ್ ಗೆ ಬರುತ್ತಿದ್ದರು. ಇದೀಗ ಅದರ ಸಂಖ್ಯೆ 1.5 ಲಕ್ಷಕ್ಕೆ ಇಳಿಕೆಯಾಗಿದೆ.
6/ 8
ಆರಂಭದಲ್ಲಿ ಬೆಳಗ್ಗೆ, ಮಧ್ಯಾಹ್ನ, ರಾತ್ರಿ ತಲಾ 400 ಜನರು ಆಗಮಿಸುತ್ತಿದ್ದರು. ಈಗ ಅದರ ಸಂಖ್ಯೆ ಪ್ರತಿ ನಿತ್ಯ 100ಕ್ಕೆ ಇಳಿಕೆಯಾಗಿದೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ತಿಳಿದು ಬಂದಿದೆ.
7/ 8
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್ ಗಳಿವೆ. ಈ ಪೈಕಿ 175 ಸ್ಥಿರ ಹಾಗೂ 24 ಮೊಬೈಲ್ ಕ್ಯಾಂಟೀನ್ ಗಳಿವೆ.
8/ 8
2017 ಆಗಸ್ಟ್ 15 ರಂದು ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ದುಡಿಯುವ ಕೆಳ ವರ್ಗದ ಜನಕ್ಕೆ ಕಡಿಮೆ ಬೆಲೆಯಲ್ಲಿ (ತಿಂಡಿ 5 ರೂ ಮತ್ತು ಊಟ 10 ರೂ) ನೀಡೋದು ಈ ಯೋಜನೆಯ ಉದ್ದೇಶವಾಗಿದೆ.