ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳೂ ಗರಿಗೆದರುತ್ತಿವೆ. ವಾಗ್ದಾಳಿ, ವಿವಾದಗಳ ಮಧ್ಯೆ ಸದ್ಯ ಬಿಜೆಪಿ ಹಿರಿಯ ನಾಯಕ ಎಚ್. ವಿಶ್ವನಾಥ್, ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿರುವ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗ ರಾಜಕೀಯ ಚಟುವಟಿಕೆಗಳೂ ಎಗ್ಗಿಲ್ಲದೆ ಸಾಗಿದೆ.
2/ 7
ಒಂದೆಡೆ ರಾಜಕೀಯ ನಾಯಕರು ಮತದಾರರನ್ನು ಸೆಳೆಯುವ ತಂತ್ರ ಹೂಡುತ್ತಿದ್ದರೆ, ಇನ್ನು ಕೆಲವರು ಪ್ರತಿಪಕ್ಷದ ಘಟಾನುಘಟಿ ನಾಯಕರನ್ನು ಸೆಳೆಯುವ ಯೋಜನೆ ರೂಪಿಸುತ್ತಿದ್ದಾರೆ.
3/ 7
ಈ ಮಧ್ಯೆ ಪ್ರಚಾರ, ಮತದಾರರಿಗೆ ನಾನಾ ಭರವಸೆಗಳು ಹಾಗೂ ಪರಸ್ಪರ ವಾಗ್ದಾಳಿಯೂ ಯಾವುದೇ ಅಡೆ ತಡೆ ಇಲ್ಲದೇ ಸಾಗಿದೆ.
4/ 7
ಸದ್ಯ ರಾಜಕೀಯ ವಲಯದಲ್ಲಿ ಬಿಜೆಪಿ ನಾಯಕ ಎಚ್. ವಿಶ್ವನಾಥ್ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿರುವ ವಿಚಾರ ಸದ್ದು ಮಾಡುತ್ತಿದೆ.
5/ 7
ಚುನಾವಣಾ ಹೊಸ್ತಿಲಲ್ಲಿ ವಿಶ್ವನಾಥ್ ಕೈ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು ಏಕೆ ಎಂಬ ಪ್ರಶ್ನೆ ಕುತೂಹಲ ಜನ ಸಾಮಾನ್ಯರಲ್ಲಿ ಮನೆ ಮಾಡಿದ್ದರೆ, ಅತ್ತ ರಾಜಕೀಯ ವಲಯದಲ್ಲಿ ಸಂಚಲನ ಹುಟ್ಟು ಹಾಕಿದೆ.
6/ 7
ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದಲ್ಲಿ ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ಭೇಟಿಯಾಗಿದ್ದಾರೆ.
7/ 7
ಇನ್ನು ನಿನ್ನೆಯಷ್ಟೇ ವಿಶ್ವನಾಥ್ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗಿಷದ್ದರು. ಈ ನಿಟ್ಟಿನಲ್ಲಿ ಅವರ ಭೇಟಿ ರಾಜಕೀಯ ವಲಯದಲ್ಲಿ ಬಿರುಗಾಳಿ ಸೃಷ್ಟಿಸಿದೆ.
ಚುನಾವಣಾ ಹೊಸ್ತಿಲಲ್ಲಿ ವಿಶ್ವನಾಥ್ ಕೈ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು ಏಕೆ ಎಂಬ ಪ್ರಶ್ನೆ ಕುತೂಹಲ ಜನ ಸಾಮಾನ್ಯರಲ್ಲಿ ಮನೆ ಮಾಡಿದ್ದರೆ, ಅತ್ತ ರಾಜಕೀಯ ವಲಯದಲ್ಲಿ ಸಂಚಲನ ಹುಟ್ಟು ಹಾಕಿದೆ.