PHOTOS: ವಿಜಯಪುರ-ಅಥಣಿ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕುಸಿತ
ವಿಜಯಪುರ-ಅಥಣಿ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕುಸಿದಿದ್ದು, ಸಂಚಾರ ಸ್ಥಗಿತಗೊಂಡಿದೆ. ವಿಜಯಪುರ ಜಿಲ್ಲೆಯ ರತ್ನಾಪೂರ ಗ್ರಾಮದ ಬಳಿ ಈ ಘಟನೆ ನಡೆದಿದೆ. 2002 ರಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ ಕೇವಲ 16 ವರ್ಷದಲ್ಲೆ ಕುಸಿದಿದೆ. ರಸ್ತೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ವಾಹನ ಸವಾರರು ಅಧಿಕಾರಿಗಳಿಗೆ ಛೀಮಾರಿ ಹಾಕತ್ತಿದ್ದಾರೆ. ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ರತ್ನಾಪೂರ-ತಿಕೋಟಾ ಮಾರ್ಗವಾಗಿ ಸಂಚಾರ ಬದಲಿಸಿದ್ದಾರೆ.