ಇಂದು ವಿರೋಧ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತ್ತು. ಭೇಟಿ ಬಳಿಕ ಮಾತನಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ವೈ, ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದರು. ಆದರೆ ಬಿಜೆಪಿ ಡಿಕೆಶಿಗೆ ಗಾಳ ಹಾಕಲು ಮುಂದಾಗಿದೆ ಎಂಬುದು ಉನ್ನತ ಮೂಲಗಳಿಂದ ಬಂದ ಮಾಹಿತಿ. ಹೀಗಾಗಿ ಮತ್ತೆ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಆಗಲಿದೆ ಎನ್ನಲಾಗುತ್ತಿದೆ.