ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ನಡೆದಿದೆ.
2/ 7
ಶಿವಮೊಗ್ಗದ ಯಡಿಯೂರಪ್ಪ ನಿವಾಸದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನುಮ ದಿನಾಚರಣೆ ಆಚರಣೆ ಮಾಡಲಾಯಿತು. ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರಗೆ ಕೇಕ್ ತಿನ್ನಿಸಿ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.
3/ 7
ಯಡಿಯೂರಪ್ಪ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಗೃಹಮಂತ್ರಿ ಆರಗ ಜ್ಞಾನೇಂದ್ರ ಭಾಗಿಯಾಗಿದ್ದರು. ಹ್ಯಾಪಿ ಬರ್ತಡೇ ಎಂದು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು.
4/ 7
ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬಿಎಸ್ ಯಡಿಯೂರಪ್ಪ ಅವರು, ನನ್ನ ಜೀವನದಲ್ಲಿ ಮರೆಲಾಗದ ಕ್ಷಣ. ನರೇಂದ್ರ ಮೋದಿಯವರು ಆಗಮಿಸಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
5/ 7
ಲಕ್ಷಾಂತರ ಜನರು ವಿಮಾನ ನಿಲ್ದಾಣದ ಉದ್ಘಾಟನೆಯ ವಿಶೇಷ ಕ್ಷಣದಲ್ಲಿ ಭಾಗವಹಿಸಬೇಕು. ಇದು ಬೆಂಗಳೂರಿನ ನಂತರ ರಾಜ್ಯದ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ ಎಂದು ಬಿಎಸ್ವೈ ತಿಳಿಸಿದ್ದರು.
6/ 7
ಮೋದಿಯವರನ್ನು ಲೋಕಾರ್ಪಣೆ ಮಾಡಲು ಕರೆದಿದ್ದೇವು. ಅವರು ನನ್ನ ಹುಟ್ಟು ಹಬ್ಬದ ದಿನದಂದೇ ಬರುತ್ತೇನೆ ಎಂದಿದ್ದಾರೆ. ಅದು ನನಗೆ ಸಂತೋಷ ತಂದಿದೆ ಎಂದರು.
7/ 7
ಇತ್ತ ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಲಿರುವ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕಕ್ಕೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ. ಶಿವಮೊಗ್ಗದಲ್ಲಿ ಏರ್ಪೋರ್ಟ್ ಉದ್ಘಾಟನೆ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.