PHOTOS: ಪ್ರಮಾಣ ವಚನಕ್ಕೂ ಮುನ್ನ ಕಾಡು ಮಲ್ಲೇಶ್ವರ ದೇವಾಲಯಕ್ಕೆ ಬಿಎಸ್ವೈ ಭೇಟಿ
ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪಅವರು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವಿಕರಿಸಲಿದ್ದು ಅದಕ್ಕೂ ಮುನ್ನ ಮಲ್ಲೇಶ್ವರದಲ್ಲಿರುವ ಕಾಡುಮಲ್ಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಿಯೋಜಿತ ಮುಖ್ಯಮಂತ್ರಿ ಬಿಎಸ್ವೈ ಅವರಿಗೆ ಶಾಸಕ ಗೋವಿಂದ ಕಾರಜೋಳ, ಸಂಸದ ಬಿ ವೈ ವಿಜೇಂದ್ರ ಸೇರಿದಂತೆ ಬಿಜೆಪಿ ಮುಖಂಡರು ಸಾಥ್ ನೀಡಿದರು.