ವೇಗವಾಗಿ ಬಂದ ಕಾರ್ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರ್ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ.
2/ 7
ಫಾಝಿಲಾ ಹಾಗೂ ತಸೀನಾ ಮೃತ ಮಹಿಳೆಯರು. ಮೃತರು ಕೆ.ಆರ್ ಪುರಂ ಮಾರ್ಗದ ಮೂಲಕ ಆಟೋದಲ್ಲಿ ಹೋಗ್ತಿದ್ದರು. ಆಟೋದಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು.
3/ 7
ಆಟೋ ಚಾಲಕ ಖಾಲೀದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳ ಜೊತೆ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದಿದೆ.
4/ 7
ಇನ್ನುಳಿದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡರಾತ್ರಿ ಸ್ಥಳಕ್ಕೆ ಕೆ.ಆರ್ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
5/ 7
ಎಸ್ಕೇಪ್ ಆಗಿರೋ ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೆ.ಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
6/ 7
ಡಿಕ್ಕಿ ಹೊಡೆದ ಕಾರು ಯಾವುದು ಅನ್ನೋದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಕೆಲವರು ಇನೋವಾ ಅಂತಾರೆ, ಇನ್ನು ಕೆಲವರು ಬೇರೆ ಕಾರು ಎಂದು ಹೇಳುತ್ತಿದ್ದಾರೆ.
7/ 7
ಹೊಸಕೋಟೆ ಟೋಲ್ ಸಿಸಿ ಕ್ಯಾಮೆರಾ ಸಹ ಪರಿಶೀಲನೆ ಮಾಡಲಾಗಿದೆ. ಸದ್ಯಕ್ಕೆ ಕಾರಿನ ಬಗ್ಗೆ ಯಾವುದೇ ಸುಳಿವಿಲ್ಲ ಎಂದು ತಿಳಿದು ಬಂದಿದೆ.