ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶವನ್ನು 48,000 ರೂ. ಗಳಿಂದ 60,00 ರೂ.ಗೆ ಏರಿಸಲಾಗಿದೆ. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲಕರವಾಗಲಿದೆ. (ಸಾಂಕೇತಿಕ ಚಿತ್ರ)
ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಯೋಜನೆಯು ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸದೇಶ್ ದರ್ಶನ್ 20 ಆಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲಾಗಿದೆ. ರಾಮನಗರದ ರಾಮದೇವರ ಬೆಟ್ಟದಲ್ಲಿ ಒಂದು ಭವ್ಯವಾದ ರಾಮಮಂದಿರವನ್ನು ನಿರ್ಮಿಗುವುುವುದಾಗಿ ತಿಳಿಸಿದ್ದಾರೆ. (ಸಾಂಕೇತಿಕ ಚಿತ್ರ)
ಕರ್ನಾಟಕದ ಇತಿಹಾಸ ಮತ್ತು ಕಲೆಯ ಶ್ರೀಮಂತಿಕೆಯನ್ನು ಬಿಂಬಿಸುವ ಹ೦ಪಿಯ ವಿಜಯವಿಠಲ ದೇವಾಲಯ ಮತ್ತು ಪುರಂದರ ಮಂಟಪ, ವಿಜಯಪುರದ ಗೋಲ್ ಗುಂಬಜ್, ಚಿಕ್ಕಬಳ್ಳಾಪುರ ಜಿಲ್ಲೆಯ ಭೋಗನಂದೀಶ್ವರ ದೇವಾಲಯ, ಬಾದಾಮಿ ಗುಹೆಗಳು, ಕಿತ್ತೂರು ಹಾಗೂ ಕೋಟೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಈ ಸ್ಥಳಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ. 3D projection mapping, ಧ್ವನಿ ಮತ್ತು ಬೆಳಕು ಪ್ರದರ್ಶನಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 2023-24 ರಲ್ಲಿ 60 ಕೋಟಿ ರೂ. ಗಳನ್ನು ಒದಗಿಸಲಾಗಿದೆ. (ಸಾಂಕೇತಿಕ ಚಿತ್ರ)