Karnataka Politics: ಸಿದ್ದರಾಮಯ್ಯ-ಡಿಕೆಶಿ ಪ್ರಮಾಣವಚನಕ್ಕೆ 8 ರಾಜ್ಯದ ಸಿಎಂ, ಘಟಾನುಘಟಿ ನಾಯಕರಿಗೆ ಆಹ್ವಾನ!
ಬೆಂಗಳೂರು: ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ದೇಶದ ಘಟಾನುಘಟಿ ನಾಯಕರು ಭಾಗಿಯಾಗಲಿರುವುದರಿಂದ ವಿವಿಐಪಿಗಳಿಗೆ Z+, CRPF, ASL ಭದ್ರತೆಯನ್ನು ನಿಗದಿಪಡಿಸಲಾಗಿದ್ದು, ವಿವಿಧ ರಾಜ್ಯದ ಮುಖ್ಯಮಂತ್ರಿಗಳಿಗೆ Z+ಮತ್ತು Z ಕ್ಯಾಟಗರಿ ಭದ್ರತೆಯನ್ನು ಒದಗಿಸಲು ನಿರ್ಧರಿಸಲಾಗಿದೆ.
2/ 10
ಮುಖ್ಯವಾಗಿ ನಾಳೆ ಎಐಸಿಸಿ ವರಿಷ್ಠರಾದ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಇರಲಿದ್ದಾರೆ.
3/ 10
ಕಾರ್ಯಕ್ರಮದಲ್ಲಿ ಭಾಗಿಯಾಗಲಿರೋ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಭಾಗವಹಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ದೀದಿ ಬೆಂಗಳೂರಿಗೆ ಬಂದಿದ್ದರು.
4/ 10
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ನಾಳೆ ಪ್ರಮಾಣವಚನದಲ್ಲಿ ಭಾಗವಹಿಸಲಿದ್ದು, ಮೊನ್ನೆ ಕಾಂಗ್ರೆಸ್ ಭರ್ಜರಿ ಜಯಗಳಿಸಿದಾಗ ಸಿದ್ದರಾಮಯ್ಯಗೆ ಕರೆ ಮಾಡಿ ಸ್ಟಾಲಿನ್ ಶುಭಾಶಯ ತಿಳಿಸಿದ್ದರು.
5/ 10
ಇನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಭಾಗವಹಿಸಲಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ.
6/ 10
ಛತ್ತೀಸ್‌ಗಡ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಘೇಲಾ ಕೂಡ ನಾಳಿನ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲೂ ಅವರು ಭಾಗವಹಿಸಿದ್ದರು.
7/ 10
ಇನ್ನು ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಅವರು ಕೂಡ ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
8/ 10
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ ಅವರು ನಾಳೆ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಇರಲಿದ್ದಾರೆ.
9/ 10
ಇನ್ನು ಪಾಂಡಿಚೇರಿ ರಾಜ್ಯದ ಮುಖ್ಯಮಂತ್ರಿ ಆಗಿರುವ ಶ್ರೀ ಎನ್ ರಂಗಸ್ವಾಮಿ ಅವರು ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
10/ 10
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಕೂಡ ಪ್ರಮಾಣ ವಚನದಲ್ಲಿ ಭಾಗವಹಿಸಲಿದ್ದು, ವಿಶೇಷವಾಗಿ ಇಷ್ಟೂ ಮುಖ್ಯಮಂತ್ರಿಗಳಿಗೆ Z+ ಕೆಟಗರಿ ಭದ್ರತೆ ಸಿಗಲಿದೆ.
First published:
110