Chikmagalur Rain: ಚಿಕ್ಕಮಗಳೂರಲ್ಲಿ ಮಳೆಗೆ ಎರಡನೇ ಬಲಿ; ಶೃಂಗೇರಿ ಪಟ್ಟಣಕ್ಕೆ ನುಗ್ಗಿದ ತುಂಗಾ ನೀರು

Karnataka Rain Updates: ಶೃಂಗೇರಿಯಲ್ಲಿ ತುಂಗಾ ನದಿಯ ಪ್ರವಾಹದಿಂದ ನದಿ ತಟದ ಮನೆಗಳಿಗೆ ನೀರು ನುಗ್ಗಿದೆ. ರಾತ್ರೋರಾತ್ರಿ ಪ್ರವಾಹದಿಂದ ವಾಹನಗಳು ಮುಳುಗಡೆಯಾಗಿವೆ. ಕಳೆದ ರಾತ್ರಿಯಿಂದಲೇ ಉಕ್ಕಿ ಹರಿಯುತ್ತಿರುವ ತುಂಗಾ ನದಿಯಿಂದ ಶೃಂಗೇರಿ ಪಟ್ಟಣದ ಹಲವು ಮನೆಗಳು ಜಲಾವೃತವಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗಿದ್ದು, ಶೃಂಗೇರಿಯ ಗಾಂಧಿ ಮೈದಾನ ಜಲಾವೃತವಾಗಿದೆ. ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ.

First published: