ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೂತನ ಅನುಭವ ಮಂಟಪಕ್ಕೆ 200 ಕೋಟಿ ಅನುದಾನ ಒದಗಿಸಿದ್ದಾರೆ. ಆದರೆ, ಮಂಟಪದ ಶಿಲಾನ್ಯಾಸ ನೆರವೇರಿಸಿ ಒಂದು ವರ್ಷ ಕಳೆದರೂ ಕಾಮಗಾರಿ ಪ್ರಾರಂಭಿಸಿಲ್ಲ. ಈ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಬೇಕು ಎಂಬ ಒತ್ತಾಯಗಳು ಇತ್ತೀಚಿನ ದಿನಗಳಲ್ಲಿ ಕೇಳಿ ಬಂದ ಹಿನ್ನಲೆ ಸಿಎಂ ಈ ಕಾಮಗಾರಿ ಪ್ರಾರಂಭಿಸಲು ಸೂಚಿಸಿದರು