ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇನ್ನು ಒಂದು ದಿನ (ಏಪ್ರಿಲ್ 20) ಮಾತ್ರ ಬಾಕಿ ಇದೆ. ಈ ಹಿನ್ನೆಯಲ್ಲಿ ಇಂದು ಹಲವು ದಿಗ್ಗಜರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅದರಲ್ಲೂ ಕೆಲ ಕೋಟಿ ಕೋಟಿ ಕುಬೇರರು ಮತಭಿಕ್ಷೆಗೆ ಇಳಿದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಹಾಗೂ ಡಿಸಿಎಂ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಘಟಾನುಘಟಿ ನಾಯಕರ ಖಜಾನೆ ಲೆಕ್ಕಾ ಇಂತಿದೆ.