PHOTOS : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ದರೂರು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ಸಿಎಂ ಯಡಿಯೂರಪ್ಪ ಪರಿಹಾರ ವಿತರಣೆ ಮಾಡಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೇರಿದಂತೆ ಜಿಲ್ಲೆಯ ಶಾಸಕರು ಸಿಎಂ ಅವರಿಗೆ ಸಾಥ್ ನೀಡಿದರು.