ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿ ಎಸ್​ ಯಡಿಯೂರಪ್ಪ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಮುರುಗೇಶ ನಿರಾಣಿ, ಎ. ಎಸ್. ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಸೇರಿದಂತೆ ನಾನಾ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

First published: