ಶಾಸಕ ಎಂ ಕೃಷ್ಣಪ್ಪ ಅವರನ್ನು ಭೇಟಿಯಾದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್

ಲೋಕಸಭಾ ಚುನಾವಣಾ ಕಾವು ದಿನೇ ದಿನೇ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಅವರು ವಿಜಯನಗರ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರನ್ನು ಭೇಟಿ ಮಾಡಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು. ಬಿ ಕೆ ಹರಿಪ್ರಸಾದ್​ ಅವರಿಗೆ ಮಾಜಿ ಶಾಸಕ ಆರ್​ ವಿ ದೇವರಾಜ್ ಸಾಥ್​​ನೀಡಿದರು. 2019 ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ್​ ಅವರು 20 ವರ್ಷಗಳ ನಂತರ ಈ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿದ್ದಾರೆ. 1999ರ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿ.ಕೆ.ಹರಿಪ್ರಸಾದ್​ ಬಿಜೆಪಿಯ ಅನಂತ್​ಕುಮಾರ್​ ವಿರುದ್ಧ 65 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ

  • News18
  • |
First published: