Photo: ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಹಳೆ
ಪ್ರವಾಹದಿಂದಾಗಿ ಕಳೆದ ಎರಡು ತಿಂಗಳಿನಿಂದ ಸಂತ್ರಸ್ತರು ನಲುಗಿದ್ದಾರೆ. ಆದರೆ ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾತ್ರ ಯಾವುದೇ ಕಾಳಜಿ ತೋರದೇ ನಿರ್ಲಕ್ಷ್ಯವಹಿಸಿದೆ. ಈವರೆಗೆ ಸಂತ್ರಸ್ತರ ಪರಿಹಾರಕ್ಕಾಗಿ ಕೇಂದ್ರದಿಂದ ಬಿಡಿಗಾಸು ಕೂಡ ಬಂದಿಲ್ಲ. ರಾಜ್ಯ ಸರ್ಕಾರ ಕೂಡ ಇದರ ನಿರ್ವಹಣೆಯಲ್ಲಿ ಸಂಪೂರ್ಣ ಸೋತಿದೆ ಎಂದು ಕೇಂದ್ರ ಮತ್ತು ರಾಜ್ಯ ಧೋರಣೆ ಖಂಡಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಬೃಹತ್ ಪ್ರತಿಭಟನೆ ನಡೆಸಿದರು.