Namma Metro: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ; ತಾಯಿ, ಮಗು ದುರ್ಮರಣ
Namma Metro Pillar: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿತಗೊಂಡಿದೆ. ಇಂದು ಬೆಳಗ್ಗೆ ಸುಮಾರು 10 ರಿಂದ 10.30 ವೇಳೆ ಮೆಟ್ರೋ ಪಿಲ್ಲರ್ ಕುಸಿತವಾಗಿದೆ.
ನಾಗವಾರ - ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ ನಡೆಯುತ್ತಿತ್ತು. ನಾಗವಾರ ಬಳಿ (ಹೆಣ್ಣೂರು ಕ್ರಾಸ್) ಮೆಟ್ರೋ ಪಿಲ್ಲರ್ ನೆಲಕ್ಕೆ ಉರುಳಿದೆ.
2/ 7
ಬೈಕ್ ಸವಾರರ ಮೇಲೆ ಮೆಟ್ರೋ ಪಿಲ್ಲರ್ ಕುಸಿದಿದೆ ಎನ್ನಲಾಗಿದೆ. ಪಿಲ್ಲರ್ ಅಡಿ ಸಿಲುಕಿರುವ ತಾಯಿ-ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
3/ 7
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕಬ್ಬಿಣದ ಸರಳುಗಳು ಕೆಳಗೆ ಬಿದ್ದಿವೆ. ಪಿಲ್ಲರ್ ಕುಸಿತ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
4/ 7
ನಮ್ಮ ಮೆಟ್ರೋ 2ನೇ ಹಂತದ ನಾಗವಾರ ಮೆಟ್ರೋ ಪಿಲ್ಲರ್ ಕಾಮಗಾರಿ ವೇಳೆ ಈ ಘಟನೆ ನಡೆದಿದೆ.
5/ 7
ಸ್ಥಳಕ್ಕೆ ಮೆಟ್ರೋ ಅಧಿಕಾರಿಗಳು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
6/ 7
ಮೆಟ್ರೋ ಪಿಲ್ಲರ್ ಅಡಿ ಸಿಲುಕಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ. ಮೃತರನ್ನು 23 ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ.
7/ 7
ತೇಜಸ್ವಿನಿ ಅವರು ಮಗುವಿನ ಜೊತೆ ಕೆಆರ್ ಪುರಂನಿಂದ ಹೆಬ್ಬಾಳಕ್ಕೆ ತೆರಳುತ್ತಿದ್ದರು. ಓವರ್ ಲೋಡ್ನಿಂದ ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.