COVID 19: ಮಾಸ್ಕ್ ಧರಿಸಿ ಬಸ್ ಹತ್ತಿ; ಪ್ರಯಾಣಿಕರಿಗೆ ಬಿಎಂಟಿಸಿ ಸೂಚನೆ
Corona Alert: ನೆರೆಯ ಚೀನಾದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಏರುತ್ತಲೇ ಇದೆ. ಹಾಗಾಗಿ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಮುಂದಾಗಿದ್ದು, ರಾಜ್ಯ ಸರ್ಕಾರದಿಂದ ಹೊಸದಾಗಿ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ.
ರಾಜ್ಯ ಸರ್ಕಾರದ ಮಾರ್ಗಸೂಚಿ ಬೆನ್ನಲ್ಲೇ ಬಿಎಂಟಿಸಿ ಸಹ ಅಲರ್ಟ್ ಆಗಿದ್ದು, ತನ್ನ ಪ್ರಯಾಣಿಕರಿಗೆ ಮಹತ್ವದ ಸೂಚನೆಯನ್ನು ನೀಡಿದೆ.
2/ 7
ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ ಬಿಎಂಟಿಸಿ ಸೂಚನೆ ನೀಡಿದೆ. ಅದರ ಜೊತೆ ತನ್ನ ಸಿಬ್ಬಂದಿಗೂ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.
3/ 7
ಹೆಚ್ಚುವರಿ ಬಸ್ ಕಾರ್ಯಾಚರಣೆಗೆ ಸಿದ್ಧತೆ
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೆಚ್ಚುವರಿ ಬಸ್ ಕಾರ್ಯಾಚರಣೆ ಸಿದ್ಧವಾಗಿದ್ದೇವೆ. ನಿತ್ಯ ಡಿಪ್ಲೋಗಳಲ್ಲಿ ಬಸ್ಗಳ ಸ್ವಚ್ಛತೆ ಕಾರ್ಯ ನಡೆಯುತ್ತಿದೆ. ಅಗತ್ಯ ಇದ್ರೆ ಬಸ್ಗಳಿಗೆ ಸ್ಯಾನಿಟೈಸರ್ ಮಾಡಲಾಗುತ್ತದೆ ಎಂದು ಬಿಎಂಟಿಸಿ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಸೂರ್ಯಸೇನ್ ಹೇಳಿದ್ದಾರೆ.
4/ 7
ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಬಿಎಂಟಿಸಿ ಸೇರಿದಂತೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು.
5/ 7
ಕೊರೊನಾ ಹರಡುವಿಕೆ ಪ್ರಮಾಣ ಇಳಿಕೆಯಾಗುತ್ತಿದ್ದಂತೆ ಕಠಿಣ ನಿಯಮಗಳೊಂದಿಗೆ ಹಂತ ಹಂತವಾಗಿ ಬಸ್ ಸಂಚಾರ ಆರಂಭಗೊಂಡಿತ್ತು.
6/ 7
ಆರಂಭದಲ್ಲಿ ಬಸ್ಗಳಲ್ಲಿ ಶೇ.50ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಲಾಗಿತ್ತು. ಆನಂತರ ಶೇ.100ರಷ್ಟು ಆಸನಗಳ ಭರ್ತಿಗೆ ಸಾರಿಗೆ ಸಂಸ್ಥೆ ಅನುಮತಿ ನೀಡಿತ್ತು.
7/ 7
ಸೋಂಕಿತ ಸಂಪರ್ಕಿತರಿಗೆ ಪರೀಕ್ಷೆ ಕಡ್ಡಾಯ
ILI/SARI ಪ್ರಕರಣಗಳಿಗೆ ಕೊವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. ಸೋಂಕಿನ ಲಕ್ಷಣ ಹೊಂದಿರುವವರು, ಖಚಿತ ಪ್ರಕರಣಗಳ ಸಂಪರ್ಕಿತರು ಇನ್ಮುಂದೆ ಕೋವಿಡ್ ಪರೀಕ್ಷೆಗೆ ಒಳಪಡುವುದು ಕಡ್ಡಾಯ ಮಾಡಲಾಗಿದೆ.