ಅಲ್ಲದೇ, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕೆಂಬ ವದಂತಿ ಹಬ್ಬಿದೆ. ಸೈಬರ್ ಸೆಂಟರ್ ಗಳ ಎದುರು ಸಾಲುಗಟ್ಟಿ ಮಹಿಳೆಯರು ನಿಂತಿದ್ದರು. ಈ ಬಗ್ಗೆ ಜನರಲ್ಲಿ ಗೊಂದಲ ಏರ್ಪಟ್ಟಿದೆ, ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಪಡೆಯಲು, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಜೋಡಣೆ ಮಾಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.