ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮ್ಯಾಂಡಸ್ ಚಂಡಮಾರುತ ಅಬ್ಬರದ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಮತ್ತು ಪ್ರವಾಸಿಗರಿಗೆ ಕಡಲತೀರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
2/ 7
ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಇಂದಿನಿಂದ ನಾಲ್ಕು ದಿನ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
3/ 7
ಮುಂದಿನ 48 ಗಂಟೆಗಳು ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.
4/ 7
ಮುಂದಿನ 48 ಗಂಟೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ.
5/ 7
ಇಂದು ಮಧ್ಯರಾತ್ರಿಯಿಂದ ನಾಳೆಯವರೆಗೂ 65- 75 ಕಿಮೀ ವೇಗದಲ್ಲಿ ನಿರಂತರ ಗಾಳಿಯ ವಾತಾವರಣ ಇರಲಿದೆ. ಇನ್ನು ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ತಲಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
6/ 7
ಇಂದು ಬೆಳಗ್ಗೆಯಿಂದಲೇ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇಬ್ಬನಿ ಬೀಳುತ್ತಿದೆ. ಜೊತೆಗೆ ಶೀತಗಾಳಿ ಸಹ ಬೀಸುತ್ತಿದೆ.
7/ 7
ಉತ್ತರ ಒಳನಾಡು ಭಾಗದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಇದರ ಜೊತೆಗೆ ಮಲೆನಾಡು ಭಾಗದಲ್ಲಿಯೂ ಜೋರು ಮಳೆಯಾಗುವ ಸಾಧ್ಯತೆಗಳಿವೆ.