ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಜ್ಜಿ ನಿಂಗಮ್ಮ ಇನ್ನಿಲ್ಲ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC President DK Shivakumar), ಸಂಸದ ಡಿ.ಕೆ. ಸುರೇಶ್ (MP DK Suresh) ಅವರ ಅಜ್ಜಿ ನಿಂಗಮ್ಮ ಅವರು ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ನಿಂಗಮ್ಮ ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ನಿಂಗಮ್ಮ ಅವರಿಗೆ (106) ವರ್ಷಗಳಾಗಿದ್ದವು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ 4.30 ಕ್ಕೆ ನಡೆಯಲಿದೆ.
2/ 4
ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿದ್ದಾರೆ.
3/ 4
ಬೆಳಗಾವಿಯಿಂದ 12 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ ಬಂದು ನಂತರ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿ, ಅಜ್ಜಿಯವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಸದ ಡಿ.ಕೆ.ಸುರೇಶ್ ಸಹ ಅಜ್ಜಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
4/ 4
ಸಂಜೆ ನಾಲ್ಕು ಗಂಟೆವರಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆಕ್ಕೆ ಕಲ್ಪಿಸಲಾಗಿದೆ. ಈಗಾಗಲೇ ದೊಡ್ಡಾಲಹಳ್ಳಿಯತ್ತ ಡಿಕೆಶಿ ಕುಟುಂಬ ತೆರಳಿರುವ ಮಾಹಿತಿ ಲಭ್ಯವಾಗಿದೆ.