ಎಸ್​.ಎಂ. ಕೃಷ್ಣ ಮನೆಯಲ್ಲಿ ಟ್ರಬಲ್ ಶೂಟರ್; ಕುತೂಹಲ ಮೂಡಿಸಿದ ಡಿ.ಕೆ. ಶಿವಕುಮಾರ್ ಭೇಟಿ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ತಮ್ಮ ರಾಜಕೀಯ ಗುರು ಮಾಜಿ ಸಿಎಂ ಎಸ್​. ಎಂ. ಕೃಷ್ಣ ಅವರ ಮನೆಗೆ ಇಂದು ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ. ಸದಾಶಿವನಗರದಲ್ಲಿರುವ ಎಸ್​.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿ ಹೂಗುಚ್ಛ ನೀಡಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಇಡಿ ವಶದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಡಿಕೆಶಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಎಸ್​.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರೇಮಾ ಕೃಷ್ಣ ಮತ್ತು ಸಂಸದ ಡಿ.ಕೆ. ಸುರೇಶ್ ಕೂಡ ಉಪಸ್ಥಿತರಿದ್ದರು.

First published: