ಡಿಕೆ ಶಿವಕುಮಾರ್ ಮಗಳ ಅದ್ದೂರಿ ಆರತಕ್ಷತೆ: ಶಿವರಾಜ್ಕುಮಾರ್ ಸೇರಿದಂತೆ ಇತರೆ ಗಣ್ಯರು ಭಾಗಿ..!
ನಂದಿ ಬೆಟ್ಟದ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ನಿನ್ನೆ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ ಹಾಗೂ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಹಾಗೂ ಎಸ್.ಎಂ. ಕೃಷ್ಣನವರ ಮೊಮ್ಮಗ ಅಮರ್ಥ್ಯ ಅವರ ಮದುವೆ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ, ಕಮಲ್ ನಾಥ್. ರಂದೀಪ್ ಸುರ್ಜೇವಾಲಾ, ಬಿಜೆಪಿ ಸಚಿವರಾದ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರು ಹಾಗೂ ಸಿನಿ ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಮಂದಿ ಗಣ್ಯರು ಈ ಆತತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವ ವಧುವರರಿಗೆ ಆಶೀರ್ವಾದಿಸಿದ್ದಾರೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)