ಹುಬ್ಬಳ್ಳಿಯಲ್ಲಿ ಎಚ್​​.ಡಿ. ಕುಮಾರಸ್ವಾಮಿ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ; ಏರ್​ಪೋರ್ಟ್​ನಲ್ಲಿ ಡಿಕೆಶಿ -ಮಾಜಿ ಸಿಎಂ ಮುಖಾಮುಖಿ

ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಹುಬ್ಬಳ್ಳಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ. ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬೆಂಗಳೂರಿಗೆ ತೆರಳುತ್ತಿದ್ದ ಡಿ.ಕೆ. ಶಿವಕುಮಾರ್ ಇಬ್ಬರೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಚ್​.ಡಿ. ಕುಮಾರಸ್ವಾಮಿ ಏರ್​ಪೋರ್ಟ್​ನಲ್ಲೇ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಜೊತೆಗೆ ಮಾತುಕತೆ ನಡೆಸಿದರು.

First published: