Rain Updates: ಕಾಫಿನಾಡಿನಲ್ಲಿ ಧಾರಾಕಾರ ಮಳೆ; ಮೂಡಿಗೆರೆಯಲ್ಲಿ ಗುಡ್ಡ ಕುಸಿತ, ಚಾರ್ಮಾಡಿ ಘಾಟ್​- ಆಲೇಖಾನ್​ ಮಾರ್ಗ ಬಂದ್

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಒಂದೇಸಮನೆ ಧಾರಾಕಾರ ಮಳೆ ಸುರಿಯುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿಯಲ್ಲೂ ಭಾರೀ ಮಳೆಯಾಗಿದ್ದು, ಚಾರ್ಮಾಡಿ ಘಾಟ್​ನಿಂದ ಆಲೇಖಾನ್​ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಳಸ, ಕುದುರೆಮುಖ, ಕೆರೆಕಟ್ಟೆ ಭಾಗದಲ್ಲೂ 2 ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಮಳೆಯಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ.

  • News18
  • |
First published: