Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

21 ಸ್ಥಿರಾಸ್ತಿ ಸೇರಿ ಖಾಲಿ ಭೂಮಿ, ಕಟ್ಟಡಗಳು, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳನ್ನು ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

  • News18 Kannada
  • |
  •   | Bangalore [Bangalore], India
First published:

  • 17

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    ಬೆಂಗಳೂರು: ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು 114.19 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    21 ಸ್ಥಿರಾಸ್ತಿ ಸೇರಿ ಖಾಲಿ ಭೂಮಿ, ಕಟ್ಟಡಗಳು, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳನ್ನು ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಸಾರ್ವಜನಿಕ ಆಸ್ತಿಯನ್ನ ಅಕ್ರಮವಾಗಿ ಬಳಸಿಕೊಂಡ ಆರೋಪದ ಅಡಿ ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿ ವಿರುದ್ದ PMLA ಆಕ್ಟ್ ಆಡಿ ಇ.ಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. (ಜಾರಿ ನಿರ್ದೇಶನಾಲಯ)

    MORE
    GALLERIES

  • 37

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​​ ಹಗರಣ ಬೆಂಗಳೂರು ನಗರದಲ್ಲಿ ಭಾರೀ ಸಂಚಲನವನ್ನು ಉಂಟು ಮಾಡಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಜಾರಿ ನಿರ್ದೇಶನಾಲಯಕ್ಕೆ ವಹಿಸಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    ಗುರು ರಾಘವೇಂದ್ರ ಸಹಕಾರ ಬ್ಯಾಂಕ್​​ನಲ್ಲಿ ಸುಮಾರು 1,800 ಕೋಟಿ ರೂಪಾಯಿ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದ ಜನರಲ್ಲಿ ಹಣ ಮತ್ತೆ ಸಿಗುವ ಭರವಸೆ ಮೂಡಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬ್ಯಾಂಕ್​ನ ಅಧ್ಯಕ್ಷರಾಗಿದ್ದ ಕೆ ರಾಮಕೃಷ್ಣ ಅವರನ್ನು ಬಂಧಿಸಿದ್ದರು. ನಕಲಿ ದಾಖಲೆ ಸೃಷ್ಟಿ ಮಾಡಿ ಸುಮಾರು 892.43 ಕೋಟಿ ರೂಪಾಯಿ ಸಾಲವನ್ನು ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    ಬ್ಯಾಂಕಿನ ಲೆಕ್ಕಪರಿಶೋಧನೆಯಲ್ಲಿ 1,480 ಕೋಟಿ ರೂಪಾಯಿ ದುರುಪಯೋಗವಾಗಿದೆ ಮತ್ತು ಈ ಪೈಕಿ ಸುಮಾರು 890 ಕೋಟಿ ರೂಪಾಯಿ ಅಥವಾ ಶೇಕಡಾ 60ರಷ್ಟು ಹಣವನ್ನು 24 ಖಾತೆಗಳಿಗೆ ಸಾಲವಾಗಿ ನೀಡಲಾಗಿದೆ ಎನ್ನಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

    ಸೊಸೈಟಿಯು ಹೆಚ್ಚಿನ ಬಡ್ಡಿಯನ್ನು ನೀಡುವುದಾಗಿ ತಿಳಿಸಿದ್ದ ಕಾರಣ ಬೆಂಗಳೂರಿನ ಅನೇಕ ಹಿರಿಯ ನಾಗರಿಕರು ಬ್ಯಾಂಕ್​ನಲ್ಲಿ ಹಣ ಠೇವಣಿ ಮಾಡಿದ್ದರು. ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಗಳೊಬ್ಬರು ಸಹ ಹಣವನ್ನು ಠೇವಣಿ ಇಟ್ಟಿದ್ದಾರೆ ಎಂದು ಸೊಸೈಟಿಯ ಒಂದು ಮೂಲ ತಿಳಿಸಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES