ನಮ್ಮ ಮೆಟ್ರೋ ಯೋಜನೆಗೆ 200 ಮಿಲಿಯನ್ ಯುರೋ ಹೂಡಿಕೆ ಮಾಡಿದ ಯುರೋಪ್ ಬ್ಯಾಂಕ್
ಮೆಟ್ರೋ 2ನೇ ಹಂತದ ಯೋಜನೆಯಲ್ಲಿ ಯುರೋಪಿಯನ್ ಇನ್ವೆಸ್ಟ್ ಮೆಂಟ್ ಬ್ಯಾಂಕ್ 500 ಮಿಲಿಯನ್ ಯುರೋ ಹೂಡಿಕೆ ಮಾಡಲು ಮುಂದೆ ಬಂದಿದ್ದು, ಇಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ 200 ಮಿಲಿಯನ್ ಯುರೋ ಯೋಜನಾ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಈ ಸಂದರ್ಭದಲ್ಲಿ ಯುರೋಪಿಯನ್ ಇನ್ವೆಸ್ಟ್ ಮೆಂಟ್ ಬ್ಯಾಂಕ್ ನಿರ್ದೇಶಕಿ ಮರಿಯಾ, ಉಪನಿರ್ದೇಶಕಿ ಸುನೀತಾ ,ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.