ರಿಜ್ವಾನ್ ಅರ್ಷದ್ ಪರ ರೋಡ್ ಶೋ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಂಗಳೂರಿನ ರಾಜಾಜಿ ನಗರದಲ್ಲಿ ರೋಡ್ ಶೋ ನಡೆಸಿದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಪರ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್ ಖಾನ್,ಬಿಬಿಎಂಪಿ ಸದಸ್ಯೆ ಪದ್ಮಾವತಿ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಭಾಗವಹಿಸಿದ್ದರು.